Kannada Songs

Kannada Songs's Lyrics

Ninnindale Ninnindale / ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ

ಈ ಎದೆಯಲ್ಲಿ ಸಿಹಿಯಾದ ಕೋಲಾಹಲಾ 
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ 
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ 
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ ।।೧।।
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ

ಇರುಳಲ್ಲಿ ಜ್ವರದಂತೆ ಕಾಡಿ ಈಗಾ 
ಹಾಯಾಗಿ ನಿಂತಿರುವೆ ಸರಿ ಏನು   
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿ ಏನು
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದೆ ।।೨।।
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 

ಹೋದಲ್ಲಿ ಬಂದಲ್ಲಿ ಎಲ್ಲಾ  ನಿನ್ನ 
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟಾ  
ನನಗೇನೋ ಅಂದಂತೆ ಅನುಮಾನ 
ಕಣ್ಣಿಂದಲೇ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ ।।೩।।

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ಈ ಎದೆಯಲ್ಲಿ ಸಿಹಿಯಾದ ಕೋಲಾಹಲಾ 
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ 
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ 
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ

Additional Information

ಗೀತಕಾರ : ಆರ ಎನ್ ಜಯಗೋಪಾಲ, ಗಾಯಕಿ: ಸೋನು ನಿಗಮ , ಸಂಗೀತ ಸಂಯೋಜಕ: : ಮಾನೋ ಮೂರ್ತಿ, ಆಲ್ಬಮ್/ಚಲನಚಿತ್ರ : ಮಿಲನಾ / Lyricist : R N Jayagopal, Singer : Sonu Nigam, Music Director : Mano Murthy, Album/Movie : Milana (2007) / Lyricist : R N Jayagopal, Singer : Sonu Nigam, Music Director : Mano Murthy, Album/Movie : Milana

Kannada Songs Lyrics Submitted By

Shilpa Gavas

June 13 2016

geetmanjusha.com © 1999-2020 Manjusha Umesh | Privacy | Community Guidelines